alex Certify ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್

ನವದೆಹಲಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು 4 ವಾರಗಳಲ್ಲಿ ಘಟನೆಯ ಬಗ್ಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ಮಾನವ ಹಕ್ಕು ಆಯೋಗ ಸೂಚಿಸಿದೆ.

ಎಫ್ಐಆರ್ ದಾಖಲಾತಿಯ ಸ್ಥಿತಿ, ತನಿಖೆಯ ಪ್ರಗತಿ, ಪ್ರಕರಣದಲ್ಲಿ ಬಂಧನ, ಸಂತ್ರಸ್ತರಿಗೆ ಪರಿಹಾರ ನೀಡಿದ್ದಲ್ಲಿ ಅದರ ಬಗ್ಗೆ ವಿವರ, ರಾಜ್ಯದಲ್ಲಿ ಈ ರೀತಿಯ ಘಟನೆಗಳನ್ನು ತಡೆಯಲು ಕೈಗೊಂಡ ಕ್ರಮಗಳು ಅಥವಾ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವರದಿ ಒಳಗೊಂಡಿರಬೇಕು ಎಂದು ತಿಳಿಸಲಾಗಿದೆ.

ಆಯೋಗದ ಡಿಐಜಿ ಶೀಘ್ರವಾಗಿ ಸತ್ಯಶೋಧನಾ ತಂಡ ರಚಿಸಿ ಘಟನೆ ನಡೆದ ಸ್ಥಳದಲ್ಲಿ ವಿಚಾರಣೆ ನಡೆಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...