ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 14ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.
ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜೀಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಚೆಕ್ ಬೌನ್ಸ್ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣ, ಕಂದಾಯ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು.
ಅಲ್ಲದೇ, ಇದರೊಂದಿಗೆ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣ ಪ್ರಕರಣ, ವಿದ್ಯುತ್ ನಿಯಂತ್ರಣ ಆಯೋಗ, ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಕೂಡ ಇತ್ಯರ್ಥಡಿಸಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.