alex Certify ನಾಳೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಪ್ರಯುಕ್ತ ರೋಮಾಂಚನಕಾರಿ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಪ್ರಯುಕ್ತ ರೋಮಾಂಚನಕಾರಿ ಕಾರ್ಯಕ್ರಮ

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ ಹಾಗೂ ಬೆಂಗಳೂರು ಅಸೋಸಿಯೇಶನ್‌ ಫಾರ್‌ ಸೈನ್ಸ್‌ ಎಜುಕೇಷನ್‌ ವತಿಯಿಂದ ಆಗಸ್ಟ್‌ 23ರಂದು ಬೆಂಗಳೂರು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುವುದು.

ಜವಾಹರಲಾಲ್‌ ನೆಹರು ತಾರಾಲಯದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 10 ಗಂಟೆಗೆ ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ನೆರವೇರಿಸಲಿದ್ದಾರೆ.

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಬಾಹ್ಯಾಕಾಶ ಕುರಿತು ಹಲವಾರು ರೋಮಾಂಚನಕಾರಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. 7 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪಿಕ್‌ ಆಂಡ್‌ ಸ್ಪೀಕ್‌ ಹಾಗೂ 4, 5 ಮತ್ತು 6ನೇ ತರಗತಿಯ ವಿದ್ಯಾರ್ಥಿಗಳಿಗೆ ಜಿಗ್‌ ಸಾ ಫಜಲ್‌ ಚಟುವಟಿಕೆ ಹಾಗೂ 12 ವರ್ಷ ಮೇಲ್ಪಟ್ಟವರಿಗೆ ವಾಕ್‌ ಇನ್‌ ಕ್ವಿಜ್‌ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://taralaya.karnataka.gov.in/107/nationa-space-day-celebrations-2024/kn ರಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 080 – 22379725 ಅನ್ನು ಸಂಪರ್ಕಿಸಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...