ನವದೆಹಲಿ: ಅಗ್ನಿಪಥ್ ಯೋಜನೆ ವಿರುದ್ಧ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಆಯೋಜಿಸಲಾಗುವುದು ಎಂದು ರೈತ ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
ಕರ್ನಾಲ್‌ನಲ್ಲಿ ನಡೆದ ಎಸ್.ಕೆ.ಎಂ. ಸಮನ್ವಯ ಸಮಿತಿ ಸಭೆಯಲ್ಲಿ ಪ್ರತಿಭಟನೆ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದು, ಶುಕ್ರವಾರದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ಯುವಕರು, ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಿದ್ದಾರೆ.
ಜೂನ್ 24 ರಂದು ಭಾರತದಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಗ್ನಿಪಥ್ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.