ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮಾಟಿಕ್ಸ್ & ರೀಸರ್ಚ್ (NCDIR) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ICMR) ನಡೆಸಿರುವ ಇತ್ತೀಚಿನ ಸಮೀಕ್ಷೆ ಪ್ರಕಾರ ಭಾರತದಲ್ಲಿ 28.5% ರಷ್ಟು ವಯಸ್ಕರು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಪೈಕಿ 27.9% ರಷ್ಟು ಮಂದಿ ತಮಗೆ ಅಧಿಕ ರಕ್ತದೊತ್ತಡ ಇದೆ ಎಂಬುದನ್ನು ಬಲ್ಲವರಾಗಿದ್ದಾರೆ. ಇವರಲ್ಲಿ 14.5% ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, 12.6% ರಷ್ಟು ಮಂದಿ ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.
ಈ ಅಧಿಕ ರಕ್ತದೊತ್ತಡ ಪ್ರಮಾಣ ನಗರ ಪ್ರದೇಶಗಳಲ್ಲಿ ಹೆಚ್ಚಾಗಿದ್ದು, 34% ರಷ್ಟಿದ್ದರೆ, ಗ್ರಾಮಾಂತರ ಪ್ರದೇಶಗಳಲ್ಲಿ ಇದರ ಪ್ರಮಾಣ 25.7% ರಷ್ಟಿದೆ. ಇನ್ನು ಗ್ರಾಮಾಂತರ ಪ್ರದೇಶದಲ್ಲಿ ರಕ್ತದೊತ್ತಡದ ಬಗ್ಗೆ ಅರಿವಿನ ಪ್ರಮಾಣ ಕಡಿಮೆ ಇದ್ದರೆ, ನಗರ ಪ್ರದೇಶದಲ್ಲಿ ಹೆಚ್ಚಿದೆಯಾದರೂ ರಕ್ತದೊತ್ತಡ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕಾರಿ ಅಂಶವಾಗಿದೆ.
ಆರು ತಿಂಗಳ ಬಳಿಕ ಆಸ್ಪತ್ರೆಯಿಂದ ಮರಳುತ್ತಿದ್ದ ಪತ್ನಿಗಾಗಿ ಕಾದು ಕುಳಿತ ವೃದ್ದ; ಭಾವುಕ ಕ್ಷಣದ ವಿಡಿಯೋ ವೈರಲ್
ದೇಶಾದ್ಯಂತ 18 ರಿಂದ 69 ರ ವಯೋಮಾನದ 10,593 ಜನರನ್ನು ಸಂಪರ್ಕಿಸಿ ಈ ಸಮೀಕ್ಷೆ ನಡೆಸಲಾಗಿದೆ. ನಗರ ಪ್ರದೇಶದಲ್ಲಿನ ಪುರುಷರಲ್ಲಿ ಹೆಚ್ಚು ಸಮಸ್ಯೆ ಕಂಡು ಬಂದಿದ್ದು, ವಯೋವೃದ್ಧರಲ್ಲಿ ಇದರ ಪ್ರಮಾಣ ಹೆಚ್ಚಿದೆ. ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ, ಸುಮಾರು ಮುಕ್ಕಾಲು ಭಾಗ ಅಂದರೆ 72.1% ರಷ್ಟು ಮಂದಿ ರಕ್ತದೊತ್ತಡದ ತಪಾಸಣೆಯನ್ನೇ ಮಾಡಿಸಿಕೊಂಡಿಲ್ಲ. ಇದರಿಂದಾಗಿ ಸಮಸ್ಯೆ ಹೆಚ್ಚಳವಾಗುತ್ತಿದೆ. 14.5% ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 99.6% ರಷ್ಟು ಮಂದಿ ಅಲೋಪತಿ ಚಿಕಿತ್ಸೆಗೆ ಮೊರೆ ಹೋಗಿದ್ದಾರೆ. ಇನ್ನು ಗ್ರಾಮಾಂತರ ಪ್ರದೇಶದ ನಿವಾಸಿಗಳು (58.2% ರಷ್ಟು) ಚಿಕಿತ್ಸಾ ಪದ್ಧತಿಗಳನ್ನು ಪಾಲಿಸುತ್ತಿದ್ದಾರೆ ಮತ್ತು ನಗರ ಪ್ರದೇಶದಲ್ಲಿ ಇದರ ಪ್ರಮಾಣ 83.2% ರಷ್ಟಿದೆ.