ಬೆಂಗಳೂರು: ಚಿಕನ್ ಆಹಾರ ಸೇವಿಸಿದ್ದ ರಾಜ್ಯದ ವಿವಿಧ ಜಿಲ್ಲೆಯ ನವೋದಯ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಫುಡ್ ಪಾಯಿಸನ್ ನಿಂದ ಬಳಲುತ್ತಿದ್ದಾರೆ.
ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವೆಸ್ಟ್ ಗೋದಾವರಿ ಜಿಲ್ಲೆಯ ಪೆದವೇಗಿಗೆ ರಾಜ್ಯದ ವಿವಿಧ ಜಿಲ್ಲೆಯ ಜವಹರ ನವೋದಯ ಶಾಲೆಯ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ಚಿಕನ್ ಫುಡ್ ಸೇವಿಸಿದ್ದರು. ಚಿಕನ್ ಆಹಾರ ಸೇವಿಸಿದ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಯಚೂರು, ಕೊಪ್ಪಳ, ಬೆಳಗಾವಿ, ಬಿಜಾಪುರ, ಬೆಂಗಳೂರು, ಮಡಿಕೇರಿ ಸೇರಿದಂತೆ ವಿವಿಧ ಜಿಲ್ಲೆಯ ಮಕ್ಕಳು ಫುಡ್ ಪಾಯಿಸನ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.