alex Certify ನವೋದಯ ವಿದ್ಯಾಲಯದ 9, 11 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯದ 9, 11 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11 ತರಗತಿಗಳಿಗೆ (ಖಾಲಿ ಇರುವ ಸೀಟಿಗೆ ಅನ್ವಯಿಸಿ) ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2024 ರ ಫೆಬ್ರವರಿ, 10 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗನ್ನು ಅಪ್ಲೋಡ್ ಮಾಡಬಹುದು. ಹೆಚ್ಚಿನ ವಿವರಗಳಿಗೆ https://navodaya.gov.in ನಲ್ಲಿ ಪಡೆಯಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...