ಕೊಚ್ಚಿಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ನೌಕಾಪಡೆಯ ಹಡಗು (ಐಎನ್ಎಸ್) ಗರುಡ ರನ್ವೇಯಲ್ಲಿ ಶನಿವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ, ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.