ಹಿಂಸಾಚಾರ ಮತ್ತು ಇಂಟರ್ನೆಟ್ ಸ್ಥಗಿತದಿಂದ ಮತದಾನ ಸ್ಥಗಿತಗೊಂಡ ಒಂದು ದಿನದ ನಂತರ ಪಾಕಿಸ್ತಾನದಲ್ಲಿ ಮತ ಎಣಿಕೆ ನಡೆಯುತ್ತಿದೆ. ಪಾಕಿಸ್ತಾನ ಗುರುವಾರ ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಮತ ಚಲಾಯಿಸಿತು.ಲಾಹೋರ್ ಕ್ಷೇತ್ರದಲ್ಲಿ ಯಾಸ್ಮಿನ್ ರಶೀದ್ ವಿರುದ್ಧ ನವಾಜ್ ಷರೀಫ್ 55,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
265 ಸ್ಥಾನಗಳ ಪೈಕಿ ಕೇವಲ 12 ಸ್ಥಾನಗಳ ಫಲಿತಾಂಶವನ್ನು ಮಾತ್ರ ಅಧಿಕೃತವಾಗಿ ಘೋಷಿಸಲಾಗಿದೆ.
ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಬೆಂಬಲಿತ ಸ್ವತಂತ್ರರು ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಗೆ ತನ್ನ ಭದ್ರಕೋಟೆಯಾದ ಪಂಜಾಬ್ ನಲ್ಲಿ ಕಠಿಣ ಸವಾಲನ್ನು ನೀಡಿದ್ದಾರೆ.
ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಇಮ್ರಾನ್ ಖಾನ್ ಬೆಂಬಲಿತ ಅಭ್ಯರ್ಥಿಗಳು ಐದು ಸ್ಥಾನಗಳನ್ನು ಗೆದ್ದರೆ, ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) (ಪಿಎಂಎಲ್-ಎನ್) ನಾಲ್ಕು ಸ್ಥಾನಗಳನ್ನು ಗೆದ್ದಿದೆ.ಹತ್ಯೆಗೀಡಾದ ಪ್ರಧಾನಿ ಬೆನಜೀರ್ ಭುಟ್ಟೋ ಅವರ ಪುತ್ರ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ.