alex Certify BREAKING NEWS: ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಜ.8ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತರಾಗಿದ್ದರು. ಇಂದು 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 6 ನಕ್ಸಲರಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...