
ಬೆಂಗಳೂರು: ಚಿಕ್ಕಮಗಳೂರು -ಉಡುಪಿ ಗಡಿ ಭಾಗದಲ್ಲಿ ಇತ್ತೀಚೆಗಷ್ಟೇ ನಕ್ಸಲರ ಚಲನವಲನ ಕಾಣಿಸಿಕೊಂಡಿದ್ದು, ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್ಎಫ್ ತಂಡ ತೀವ್ರಗೊಳಿಸಿತ್ತು. ನಿನ್ನೆ ರಾತ್ರಿ ಎಎನ್ಎಫ್ ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಎನ್ಆರ್ ಪುರ ಹಾಗೂ ಉಡುಪಿ, ಕಾರ್ಕಳ ಭಾಗದಲ್ಲಿ ಸಕ್ರಿಯನಾಗಿದ್ದ ವಿಕ್ರಂ ಗೌಡ, ಕೇರಳ, ಕೊಡಗು ಭಾಗದಲ್ಲಿಯೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ.
ಇತ್ತೀಚೆಗೆ ಚಿಕ್ಕಮಗಳೂರು ಭಾಗದಲ್ಲಿ ಮುಂಡಗಾರು ಲತಾ ನೇತೃತ್ವದ ನಕ್ಸಲರ ತಂಡ ಓಡಾಡಿದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಎಎನ್ಎಫ್, ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಿದ್ದರು.
ಉಡುಪಿ ಜಿಲ್ಲೆ ಹೆಬ್ರಿ ಸಮೀಪ ಪೀತಬೈಲ್ ಎಂಬಲ್ಲಿ ಶೂಟ್ ಔಟ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ, ಎಎನ್ಎಫ್ ತಂಡದ ಕೂಂಬಿಂಗ್ ವೇಳೆ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಮುಖಾಮುಖಿಯಾಗಿದ್ದು, ಗುಂಡಿನ ಚಕುಮತಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿರುವ ಮಾಹಿತಿ ಗೊತ್ತಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
(ಸಾಂದರ್ಭಿಕ ಚಿತ್ರ)