ಚಿಕ್ಕಮಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಓಡಾಟ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿಯೂ ನಕ್ಸಲರು ಓಡಾಟ ನಡೆಸಿದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಒಂಟಿ ಮನೆಗಳಿಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾ ಪೊಲೀಸ್ ಸಧೀಕ್ಷಕ ವಿಕ್ರಂ ಆಮಟೆ ಮತ್ತು ನಕ್ಸಲ್ ನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ.
ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ಆಗಮಿಸಿದ್ದ ನಕ್ಸಲರು ಅರಣ್ಯ ಒತ್ತುವರಿ ಮತ್ತು ಕಸ್ತೂರಿರಂಗನ್ ವರದಿ ಕುರಿತಾಗಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕಿದ್ದು, ಕುದುರೆಮುಖ, ತನಿಕೋಡು ಚೆಕ್ ಪೋಸ್ಟ್ ನಲ್ಲಿ ಕೂಂಬಿಂಗ್ ಆರಂಭಿಸಲಾಗಿದೆ. ಉಡುಪಿ, ಚಿಕ್ಕಮಗಳೂರು ಗಡಿ ಭಾಗದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.
(ಸಾಂದರ್ಭಿಕ ಚಿತ್ರ)