
ಚಿಕ್ಕಮಗಳೂರು: ಕುಖ್ಯಾತ ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಬಳಿಕ ರಾಜ್ಯದಲ್ಲಿ ನಕ್ಸಲರ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ನಕ್ಸಲ್ ವಿಗ್ರಹ ಪಡೆಯಿಂದ ಕಾರ್ಯಾಚರಣೆ ಮುಂದುವರೆಸಲಾಗಿದೆ. ರಾಜ್ಯದ ಐವರು ನಕ್ಸಲರು ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕೆರೆಕಟ್ಟೆ, ಕಿಗ್ಗಾ ಅರಣ್ಯದಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತೀವ್ರ ಹುಡುಕಾಟ ನಡೆಸಲಾಗಿದೆ. ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ ಅರಣ್ಯ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.