ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನಕ್ಸಲರ ಚಲನವಲನ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಬಳಿ ನಕ್ಸಲರು ಓಡಾಟ ನಡಿಸಿದ್ದಾರೆ ಎದು ತಿಳಿದುಬದಿದೆ.
ಕೊಂಬಾರು ಬಳಿಯ ಚೆರು ಗ್ರಾಮಕ್ಕೆ ನಕ್ಸಲರ ತಂಡ ಭೇಟಿ ನೀಡಿದ್ದು, ಮನೆಯೊಂದರಲ್ಲಿ 2 ಗಂಟೆಗಳ ಕಾಲ ತಂಗಿದ್ದರು. ನಂತರ ಅದೇ ಮನೆಯಲ್ಲಿ ಊಟ ಮಾಡಿ ಬಳಿಕ ದಿನಸಿ ಖರೀದಿಸಿ ತೆರಳಿದ್ದಾರೆ ಎನ್ನಲಾಗಿದೆ.
ಒಟ್ಟು 6 ಜನ ನಕ್ಸಲರು ಶಸ್ತ್ರಾಸ್ತ್ರ ಸಮೇತವಾಗಿ ಭೇಟಿ ನೀಡಿದ್ದು, ಗುರುವಾರ ರಾತ್ರಿ 9 ಗಂಟೆಯವರೆಗೂ ಮನೆಯಲ್ಲಿದ್ದರು. ಬಳಿಕ ಅದೇ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಣ್ಯಕ್ಕೆ ತೆರಳಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿದ್ದ ತಂಡದಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ, ಲತಾ ಇದ್ದರು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ನಕ್ಸಲರು ಭೇಟಿ ನೀಡಿದ್ದ ಅನೆಗೆ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.