ಮುಂಬೈ: ಮಾದಕದ್ರವ್ಯ ನಿಯಂತ್ರಣ ಬ್ಯೂರೋದ(NCB) ಅಧಿಕಾರಿಯೊಬ್ಬರು ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ್ದಾರೆ.
ಮಹಿಳೆ ದೂರಿನ ನಂತರ ದಿನೇಶ್ ಚವ್ಹಾಣ್(35) ಎಂದು ಗುರುತಿಸಲಾಗಿರುವ ಆರೋಪಿತ ಎನ್‌ಸಿಬಿ ಅಧಿಕಾರಿನ್ನು ಬಂಧಿಸಿ ಮಹಾರಾಷ್ಟ್ರ ಪೊಲೀಸರಿಗೆ ಒಪ್ಪಿಸಲಾಗಿದೆ.
ನವಿ ಮುಂಬೈ ನಿವಾಸಿಯಾಗಿರುವ ದಿನೇಶ್, ಎನ್‌ಸಿಬಿ ಮುಂಬೈನ ಎಸ್‌ಪಿ ಶ್ರೇಣಿಯ ಅಧಿಕಾರಿಯಾಗಿದ್ದು, ಅವರು ಕೆಲವು ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ರಜೆಯಲ್ಲಿದ್ದರು ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಅವರು ತೆಲಂಗಾಣದ ಹೈದರಾಬಾದ್‌ನಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ., ಅಲ್ಲಿಗೆ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹೋಗಿದ್ದರು. ದೂರು ನೀಡಿದ ಮಹಿಳೆ ಕೂಡ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.
ಗುರುವಾರದ ಬೆಳಗಿನಜಾವ ದಿನೇಶ್ ರೈಲಿನಲ್ಲಿದ್ದ 25 ವರ್ಷದ ಮಹಿಳೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದಾನೆ. ಆಕೆಯ ಒಳ ಉಡುಪುಗಳನ್ನು ಆಕೆಯ ಬ್ಯಾಗಿನಿಂದ ಹೊರತೆಗೆದು, ಮೂಸಿ ನೋಡಿ ಅವನ ಎದೆಯ ಮೇಲೆ ಇಟ್ಟುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಮಹಿಳೆ ಕೂಗಾಡಿದಾಗ ಇತರ ಪ್ರಯಾಣಿಕರು ನೆರವಿಗೆ ಬಂದಿದ್ದಾರೆ. ಟಿಕೆಟ್ ಪರೀಕ್ಷಕರು ಮಹಿಳೆಯ ಹೇಳಿಕೆಯನ್ನು ದಾಖಲಿಸಿ ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಲಾಗಿದೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.