alex Certify BREAKING: ಶಾರುಖ್ ಪುತ್ರನ ಡ್ರಗ್ಸ್ ಪ್ರಕರಣ, NCB ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾರುಖ್ ಪುತ್ರನ ಡ್ರಗ್ಸ್ ಪ್ರಕರಣ, NCB ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಲಂಚ ಸ್ವೀಕಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ NCB ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ ನೀಡಲಾಗಿದೆ.

ಈ ಪ್ರಕರಣದಲ್ಲಿ ಆರೋಪ, ಪ್ರತ್ಯಾರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ತನಿಖಾ ತಂಡದಿಂದ ಅವರಿಗೆ ಕೊಕ್ ನೀಡಲಾಗಿದೆ. ಆರ್ಯನ್ ಖಾನ್ ನನ್ನು ಪ್ರಕರಣದಿಂದ ಕೈಬಿಡಲು ಎನ್.ಸಿ.ಬಿ. ನಿರ್ದೇಶಕ ಸಮೀರ್ ವಾಂಖೆಡೆ ಕೋಟಿಗಟ್ಟಲೇ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯಿಂದ ಸಮೀರ್ ಗೆ ಕೊಕ್ ನೀಡಲಾಗಿದೆ.

ನನ್ನನ್ನು ತನಿಖೆಯಿಂದ ತೆಗೆದುಹಾಕಿಲ್ಲ. ಈ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ನ್ಯಾಯಾಲಯದಲ್ಲಿ ನನ್ನ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಆದ್ದರಿಂದ ದೆಹಲಿ ಎನ್‌ಸಿಬಿಯ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಸಮೀರ್ ವಾಂಖೆಡೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...