ನವದೆಹಲಿ: 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಗಳು 10 ಸ್ಥಾನಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದ್ದು, ಬಿಜೆಪಿ ನೇತೃತ್ವದ ‘ಎನ್.ಡಿ.ಎ.’ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿದೆ.
ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ‘ಅಬ್ ಕಿ ಬಾರ್ ಚಾರ್ ಸೌ ಪಾರ್’ ಘೋಷಣೆಯೊಂದಿಗೆ 400 ಸ್ಥಾನ ಗೆಲ್ಲುವ ಗುರಿ ಹೊಂದಿ ಭರ್ಜರಿ ಪ್ರಚಾರ ನಡೆಸಿದ್ದ ಬಿಜೆಪಿ ಸ್ವಂತ ಬಲದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗದೆ ಮಿತ್ರ ಪಕ್ಷಗಳನ್ನು ಅವಲಂಬಿಸಬೇಕಾಯಿತು.
ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದ ಬಿಜೆಪಿ ಈಗ ಉಪ ಚುನಾವಣೆಯಲ್ಲಿಯೂ ನಿರಾಸೆ ಅನುಭವಿಸಿದೆ. 13 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನ ಗಳಿಸಿದ್ದರೆ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ. ಈ ಮೂಲಕ ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ನಿರಾಸೆಯಾಗಿದೆ.