alex Certify ಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಜು. 18 ರಂದು ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಪೂರ್ವಸಿದ್ಧತೆ ಮಾಡಿಕೊಳ್ಳತೊಡಗಿದೆ. ಮೈತ್ರಿಕೂಟ ಬಲಪಡಿಸಲು ಮುಂದಾಗಿದೆ. ಬಿಜೆಪಿ -ಜೆಡಿಎಸ್ ನಡುವೆ ಮೈತ್ರಿ ಆಗಬಹುದೆಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದು, ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ನಂತರ ಎನ್.ಡಿ.ಎ. ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...