ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. 377 ಸ್ಥಾನ ಗಳಿಸಲಿದೆ. ಇಂಡಿಯಾ ಮೈತ್ರಿಕೂಟ 93 ಸ್ಥಾನ ಗಳಿಸಲಿದೆ ಎಂದು ಜೀ ನ್ಯೂಸ್, ಮ್ಯಾಟ್ರಿಜ್ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.
ಕಳೆದ ಚುನಾವಣೆಯಲ್ಲಿ ಎನ್.ಡಿ.ಎ. 351 ಸ್ಥಾನ ಗಳಿಸಿತ್ತು. ಈ ಬಾರಿ ಕರ್ನಾಟಕದಲ್ಲಿ ಎನ್.ಡಿ.ಎ.ಗೆ 23, ಕಾಂಗ್ರೆಸ್ ಗೆ 5 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25, ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ತಲಾ ಒಂದು ಸ್ಥಾನ ಗಳಿಸಿದ್ದರು. ಈ ವರ್ಷ ಏಪ್ರಿಲ್, ಮೇ ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.