![](https://kannadadunia.com/wp-content/uploads/2023/03/1669034457_supreme-court.jpg)
ನವದೆಹಲಿ: ಬರ ಪರಿಹಾರ ಕುರಿತ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ.
ಬರ ನಿರ್ವಹಣೆಗಾಗಿ ಎನ್.ಡಿ.ಆರ್.ಎಫ್. ಹಣಕಾಸು ನೆರವು ನೀಡುವ ಸಂಬಂಧ ಇರುವ ಸಮಸ್ಯೆಯನ್ನು ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳೇ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.
ಬರ ನಿರ್ವಹಣೆಗೆ ಎನ್.ಡಿ.ಆರ್.ಎಫ್.ನಿಂದ ನಿಧಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಮಂಗಳವಾರ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಸಿದ ನ್ಯಾಯಪೀಠ ರಾಜ್ಯವನ್ನು ನೀವೇ ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದು, ವಿಚಾರಣೆ ವೇಳೆ ಈ ಸಂಬಂಧ ಇದುವರೆಗಿನ ಬೆಳವಣಿಗೆಗಳನ್ನು ಪಡೆದುಕೊಂಡಿದೆ. ಜನವರಿಗೆ ವಿಚಾರಣೆ ಮುಂದೂಡಿದೆ.