ಬೆಂಗಳೂರು : ವಿಶ್ವವಿದ್ಯಾಲಯಗಳ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ವಿಶ್ವವಿದ್ಯಾಲಯಗಳ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.