ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಮಂಗಳೂರಿನ ಕೇಂದ್ರ ಕಾರಾಗೃಹವು ಮಂಗಳೂರಿನ ಹೃದಯ ಭಾಗದಲ್ಲಿದೆ. ಇಲ್ಲಿನ ಕಾಂಪೌಂಡ್ ಕಟ್ಟಡದ ಎತ್ತರವೂ ತೀರಾ ಕಡಿಮೆ ಇದೆ. ಕಾರಾಗೃಹದಲ್ಲಿ ನಡೆಯುವ ಚಟುವಟಿಕೆಗಳು ಸಹ ಹೊರಗಡೆ ಕಾಣುವಂತಾಗಿದೆ. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಅಕ್ರಮ ಚಟುವಟಿಕೆಗಳು ನಡೆಯುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಸದರಿ ಕಾರಾಗೃಹವನ್ನು ಸ್ಥಳಾಂತರ ಮಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.