ಬೆಂಗಳೂರು: ವೈದ್ಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ನೀಟ್ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲು ಸರ್ಕಾರ ಚಿಂತನೆ ನಡೆಸಿದೆ.
ನೀಟ್ ನಿಷೇಧ ಮಾಡುವಂತೆ ಕೋರಿ ಸೋಮವಾರ ಇಲ್ಲವೇ ಮಂಗಳವಾರ ವಿಧಾನ ಮಂಡಲ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲು ಸರ್ಕಾರ ಚಿಂತನೆ ನಡೆಸಿದೆ. ಕಳೆದ ತಿಂಗಳು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಕ್ಕೆ ನೀಟ್ ಬೇಡ ಎಂದು ಹೇಳಿದ್ದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಪರೀಕ್ಷೆಯ ಬಗ್ಗೆ ಸುಪ್ರೀಂಕೋರ್ಟ್ ಸಂದೇಹ ವ್ಯಕ್ತಪಡಿಸುತ್ತಿದೆ. ಈ ಅಲೆ ಕೇಂದ್ರದ ವಿರುದ್ಧ ತಿರುಗಿದ್ದು, ಇದನ್ನು ಗಮನಿಸಿದ ರಾಜ್ಯ ಸರ್ಕಾರ ನೀಟ್ ವಿರುದ್ಧ ನಿರ್ಣಯ ಮಂಡಿಸಲು ಇದು ಸಕಾಲವೆಂದು ಭಾವಿಸಿದೆ. ಹೀಗಾಗಿ ನೀಟ್ ಕುರಿತಂತೆ ಸೋಮವಾರ ಇಲ್ಲವೇ ಮಂಗಳವಾರ ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಹೇಳಲಾಗಿದೆ.