ಬೆಂಗಳೂರು: ನೀಟ್, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಕೋಚಿಂಗ್ ಆರಂಭಿಸಲು ಚಿಂತನೆ ನಡೆದಿದೆ. ಖಾಸಗಿಯಾಗಿ ಲಕ್ಷಾಂತರ ಹಣ ನೀಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ ಮಕ್ಕಳಿಗೆ ಇದರಿಂದ ಅನುಕೂಲವಾಗುತ್ತದೆ. ಆಯ್ದ ಕಾಲೇಜುಗಳಲ್ಲಿ ತಜ್ಞರಿಂದ ಕೋಚಿಂಗ್ ಆರಂಭಿಸಲಿದ್ದು, ಆಸಕ್ತ ಮಕ್ಕಳು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.