ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET) – 2021 ಸೆಪ್ಟೆಂಬರ್ 12 ರಂದು ನಡೆಯಲಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ)ಯ ವೆಬ್ಸೈಟ್ನಲ್ಲಿ ಇಂದು ಸಂಜೆ 5 ಗಂಟೆಯಿಂದ ಪ್ರಾರಂಭವಾಗಲಿದೆ.
ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕೊರೋನಾ ಹಿನ್ನಲೆಯಲ್ಲಿ ಪರೀಕ್ಷೆಯನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ. 2020 ರಲ್ಲಿ 3862 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುವುದು. ಕೊರೋನಾ ಮಾರ್ಗಸೂಚಿಗಳೊಂದಿಗೆ ಪರೀಕ್ಷೆ ನಡೆಯಲಿದೆ.