ನವದೆಹಲಿ: ನೀಟ್ ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಭ್ಯರ್ಥಿಗಳಿಗೆ ನೀಡಲಾಗಿರುವ ಗ್ರೇಸ್ ಅಂಕವನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
NEET-UG 2024ರ 1563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕ ನೀಡಿರುವ ರಷ್ಟ್ರೀಯ ಪರೀಕ್ಷಾ ಏಜೆನ್ಸಿಯ ನಿರ್ಧಾರವನ್ನು ಹಿಂಪಡೆಯಲಾಗಿದೆ. ಅಂತಹ ಅಭ್ಯರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳ ವಿಚಾರಣೆ ಇಂದು ನಡೆದಿದ್ದು, ಈ ವೇಳೆ ಎನ್ ಟಿಎ ನೀಡಿರುವ ಗ್ರೇಸ್ ಅಂಕಗಳನ್ನು ರದ್ದುಗೊಳಿಸಿ ಜೂನ್ 23ಕ್ಕೆ ಮರುಪಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.