ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ಕೋಟಾದಲ್ಲಿ ನಡೆದ 25ನೇ ಪ್ರಕರಣವಾಗಿದೆ.
ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿ ಕೋಟಾ ನಗರದ ಬ್ಲೇಜ್ ಹಾಸ್ಟೇಲ್ ನಲ್ಲಿದ್ದುಕೊಂಡು ನೀಟ್ ಗಾಗಿ ತಯಾರಿ ನಡೆಸಿದ್ದಳು. ಇದೀಗ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸ್ಪರ್ಧಾತ್ಮಕ ಪರೀಕ್ಷಾ ಒತ್ತಡದಿಂದಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಅಧಿಕಾರಿಗಳು ವರದಿ ಮಾಡಿದ್ದಾರೆ. ರಾಜಸ್ಥಾನದ ಕೋಟಾದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಒಟ್ಟು 25 ವಿದ್ಯಾರ್ಥಿಗಳು ಸಾವಿಗೆ ಶರಣಾಗಿರುವುದು ಆತಂಕಕ್ಕೆ ಕಾರಣವಾಗಿದೆ.