ಬೆಂಗಳೂರು: ಈ ಬಾರಿಯ ನೀಟ್ ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದು, ಕೇಂದ್ರ ಸರ್ಕಾರ ಇನ್ನಷ್ಟು ಅನಾಹುತಗಳಿಗೆ ಅವಕಾಶವಾಗದಂತೆ ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಆಗ್ರಹಿಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಈ ಬಾರಿ ಆಶ್ಚರ್ಯಕರ ರೀತಿಯಲ್ಲಿ 67 ಜನ ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದಾರೆ. ಪ್ರತಿಷ್ಠಿತ ಏಮ್ಸ್ ನಲ್ಲಿ ಲಭ್ಯ ಇರುವ ಪ್ರವೇಶಾತಿ ಸಂಖ್ಯೆ 56 ಆಗಿದ್ದು, ಉಳಿದ 11 ವಿದ್ಯಾರ್ಥಿಗಳ ಆಸೆ ಭಗ್ನವಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ತೀವ್ರ ಅನುಮಾನ ವ್ಯಕ್ತಪಡಿಸಿದ್ದು, ತಕ್ಷಣವೇ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.