ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆ(ನೀಟ್)ಗೆ ದಿನಾಂಕ ಪ್ರಕಟಿಸಲಾಗಿದ್ದು, ಏಪ್ರಿಲ್ 18 ರಂದು ಪರೀಕ್ಷೆ ನಡೆಯಲಿದೆ.
ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆ 2021 ರ ಏಪ್ರಿಲ್ 18 ರಂದು ಕಂಪ್ಯೂಟರ್ ಆಧಾರಿತ ಆನ್ಲೈನ್ ಮಾದರಿಯಲ್ಲಿ ನೀಟ್ ಪಿಜಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಸ್ನಾತಕೋತ್ತರ ವೈದ್ಯಕೀಯ ಪದವಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳು ಜೂನ್ 30 ರೊಳಗೆ ಇಂಟರ್ನ್ ಶಿಪ್ ಮತ್ತು ಬೇಕಿರುವ ಅರ್ಹತೆಗಳನ್ನು ಪೂರ್ಣಗೊಳಿಸಬೇಕು ಎಂದು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ ನಿಂದ ಮಾಹಿತಿ ನೀಡಲಾಗಿದ್ದು, ಅರ್ಜಿ ನಮೂನೆ ಮತ್ತು ನೀಟ್ ಕೈಪಿಡಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.