alex Certify ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು

ನವದೆಹಲಿ: ನೀಟ್ -ಯುಜಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಮೇ 5ರಂದು ನಡೆದ ನೀಟ್ -ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ಅಥವಾ ಇತರ ಯಾವುದೇ ಸ್ವತಂತ್ರ ಸಂಸ್ಥೆಯಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ 20 ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಯನ್ನು ಹೊಸದಾಗಿ ನಡೆಸಲು ಎನ್.ಟಿ.ಎ.ಗೆ ಅಥವಾ ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ. 620ಕ್ಕೂ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳ ಉತ್ತರದ ದತ್ತಾಂಶದ ಮಾಹಿತಿಯನ್ನು ಹೆಚ್ಚಿನ ಮುತುವರ್ಜಿಯಿಂದ ತನಿಖೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ವಿದ್ಯಾರ್ಥಿಗಳು ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...