ಬೆಂಗಳೂರು : ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ 1 ವರ್ಷದ ಮಗು ಬಲಿಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏನಿದು ಘಟನೆ
ಹಾಸನದಲ್ಲಿ 1 ವರ್ಷದ ಮಗು 10 ಅಡಿಯಿಂದ ಬಿದ್ದು ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಪೋಷಕರು ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಆಂಬುಲೆನ್ಸ್ ಮೂಲಕ ಕರೆದುಕೊಂಡು ಬಂದಿದ್ದರು.
ಆದರೆ ನಿಮ್ಹಾನ್ಸ್ ಆಸ್ಪತ್ರೆ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ್ದು, ಇಲ್ಲಿ ಬೆಡ್ ಇಲ್ಲ ಬೇರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗು ಆಂಬುಲೆನ್ಸ್ ನಲ್ಲೇ ಅರ್ಧಗಂಟೆ ನರಳಾಡಿ ಮೃತಪಟ್ಟಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡದಿದ್ದಕ್ಕೆ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗುವಿಗೆ ಬೆಡ್ ಇಲ್ಲ ಎಂದ ಆಸ್ಪತ್ರೆ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸೆ ಕೂಡ ಕೊಡಲಿಲ್ಲ , ಇಲ್ಲಿ ಬೆಡ್ ಇಲ್ಲ ಎಂದು ಬೇರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡಿ ಹೋಗಿ ಎಂದು ಹೇಳಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.