alex Certify ‘ಸಿಲಿಕಾನ್ ಸಿಟಿ’ ಜನರೇ ಗಮನಿಸಿ : ಸೆ.11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟಗಳ ‘ಬೆಂಗಳೂರು ಬಂದ್’ ಖಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಲಿಕಾನ್ ಸಿಟಿ’ ಜನರೇ ಗಮನಿಸಿ : ಸೆ.11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟಗಳ ‘ಬೆಂಗಳೂರು ಬಂದ್’ ಖಚಿತ

ಬೆಂಗಳೂರು : ಸೆ.11 ರಂದು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿರುವ ‘ಬೆಂಗಳೂರು ಬಂದ್’ ಖಚಿತವಾಗಿದೆ.

ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಒಕ್ಕೂಟದ ಸದಸ್ಯರ ನಡುವೆ ನಿನ್ನೆ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಈ ಹಿನ್ನೆಲೆ ಸೆ.11 ರಂದು ಖಾಸಗಿ ಒಕ್ಕೂಟಗಳ ಬೆಂಗಳೂರು ಬಂದ್ ಖಚಿತವಾಗಿದೆ.

ಸೆ.11 ರಂದು ಬೆಂಗಳೂರು ಬಂದ್ ನಡೆಯುವ ಹಿನ್ನೆಲೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಬಂದ್ ನಿಂದ ಹಿಂದೆ ಸರಿಯುವುದಿಲ್ಲ ಎಂದು ಒಕ್ಕೂಟದ ಸದಸ್ಯರು ಪಟ್ಟು ಹಿಡಿದಿದ್ದು, ಸೆ.11 ರ ಸಾರಿಗೆ ಬಂದ್ ಹಿಂಪಡೆಯುವಂತೆ ಸಾರಿಗೆ ಸಚಿವರು, ಅಧಿಕಾರಿಗಳು ಮನವೊಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ.

ಶಕ್ತಿ ಯೋಜನೆ ಹಿನ್ನೆಲೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಂದ್ ನಡೆಸಲಿದೆ. ಬೆಂಗಳೂರು ಬಂದ್ ಗೆ ಖಾಸಗಿ ಶಾಲಾ ಬಸ್ ಗಳ ಚಾಲಕರು ಕೂಡ ಬೆಂಬಲ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...