ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ಮುಷ್ಕರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.
ಸಂಘದ ಮುಖಂಡರೊಂದಿಗೆ ಕಾರ್ಮಿಕ ಇಲಾಖೆ ಆಯುಕ್ತರು ಡಿಸೆಂಬರ್ 30ರಂದು ಸಂಧಾನ ಸಭೆ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ.
ನೌಕರರ ಸಂಘದ ಮುಖಂಡರೊಂದಿಗೆ ಶುಕ್ರವಾರ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಸಂಧಾನ ಸಭೆಯನ್ನು ಡಿಸೆಂಬರ್ 30 ಕ್ಕೆ ಮುಂದೂಡಲಾಗಿದೆ. ಕಾರ್ಮಿಕ ಇಲಾಖೆ ಆಯುಕ್ತರು, ಸಂಘಟನೆಗಳ ಮುಖಂಡರು, ಸಾರಿಗೆ ನಿಗಮಗಳ ಅಧಿಕಾರಿಗಳು ಸಂಧಾನ ಸಭೆಯಲ್ಲಿ ಭಾಗವಹಿಸಲಿದ್ದು, ಸಭೆಯಲ್ಲಿ ಕೈಗೊಳ್ಳುವ ನಿರ್ಧಾರವನ್ನು ಸಂಘಟನೆಗಳ ಮುಖಂಡರು ಒಪ್ಪದಿದ್ದಲ್ಲಿ ಡಿಸೆಂಬರ್ 31 ರಂದು ಬೆಳಿಗ್ಗೆ 6 ಗಂಟೆಯಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ.