
ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ನಟ ಧ್ರುವ ಸರ್ಜಾ ತೀವ್ರವಾಗಿ ಖಂಡಿಸಿದ್ದಾರೆ.
ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ನಲ್ಲಿ ನಡೆದ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರವೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗಳಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ಧ್ರುವ ಸರ್ಜಾ ಒತ್ತಾಯಿಸಿದ್ದಾರೆ.