ಬೆಳಗಾವಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಅಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಅತ್ತ ಬೆಳಗಾವಿಯಲ್ಲಿಯೂ ರಸ್ತೆ ತಡೆ, ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ.
ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಮೂಲದ ಫಯಾಜ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಒಂದೆಡೆ ಬಿಜೆಪಿ ಕಾರ್ಯಕರ್ತರು ಮುನವಳ್ಳಿ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಇನ್ನೊಂದೆಡೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸೌರಭ್ ಛೋಪ್ರಾ, ವಿರೂಪಾಕ್ಶ ಮಾಮನಿ ನೇತೃತ್ವದಲ್ಲಿ ಧಾರವಾಡ-ಗೋಕಾಕ್ ಹೆದ್ದಾರಿ ತಡೆ ನಡೆಸಿ ಧರಣಿ ನಡೆಸಲಾಗುತ್ತಿದೆ. ಧರಣಿಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆಯಗಬೇಕು ಎಂದು ಒತ್ತಾಯಿಸಿದ್ದಾರೆ.
ಈ ನಡಿವೆ ಆರೋಪಿ ಫಯಾಜ್ ಹುಟ್ಟೂರು ಮುನವಳ್ಳಿ ಸಂಪೂರ್ಣ ಸ್ತಬ್ಧವಾಗಿದ್ದು, ಬಂದ್ ವಾತಾವರಣವಿದೆ. ಮುಸ್ಲಿಂ ಸಮುದಾಯದವರು ಮುನವಳ್ಳಿ ಬಂದ್ ಗೆ ಬೆಂಬಲ ನೀಡಿದ್ದಾರೆ.