alex Certify BREAKING NEWS: ನೇಹಾ ಹತ್ಯೆ ಪ್ರಕರಣ: ಗೃಹ ಸಚಿವರ ಮನೆಗೆ ABVP ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ನೂರಾರು ವಿದ್ಯಾರ್ಥಿ ಮುಖಂಡರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನೇಹಾ ಹತ್ಯೆ ಪ್ರಕರಣ: ಗೃಹ ಸಚಿವರ ಮನೆಗೆ ABVP ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ನೂರಾರು ವಿದ್ಯಾರ್ಥಿ ಮುಖಂಡರು ಪೊಲೀಸ್ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಜಮಾವಣೆಗೊಂಡಿರುವ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಆರೊಪಿಗೆ ಕಠಿಣ ಶಿಕ್ಷೆ ನೀಡಬೇಕು. ನೇಹಾ ಹತ್ಯೆಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವೇಳೆ ನೂರಾರು ಕಾರ್ಯಕರ್ತರು ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಪ್ರತಿಭಟನಾ ಕಾರರನ್ನು ತಡೆದು, ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...