alex Certify BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿಯ ರಕ್ತದ ಮಾದರಿ ಸಂಗ್ರಹಿಸಿದ ವೈದ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿಯ ರಕ್ತದ ಮಾದರಿ ಸಂಗ್ರಹಿಸಿದ ವೈದ್ಯರು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು, ಆರೋಪಿ ಫಯಾಜ್ ನ ರಕ್ತದ ಮಾದರಿ ಸಂಗ್ರಹಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಆರೋಪಿ ಫಯಾಜ್ ಡಿಎನ್ ಎ ಪರೀಕ್ಷೆ ನಡೆಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ 1ನೇ ಜೆ ಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿ ಫಯಾಜ್ ನ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಸ್ಥಳ, ಚಾಕುವಿಗೆ ತಗುಲಿದ್ದ 2 ಮಾದರಿಯ ರಕ್ತದ ಗುರುತು, ಎರಡು ರಕ್ತದ ಮಾದರಿ ಯಾರದೆಂದು ಪರೀಕ್ಷಿಸಲು ಡಿಎನ್ ಎ ಟೆಸ್ಟ್ ಮಾಡುವ ನಿಟ್ಟಿನಲ್ಲಿ ಹಾಗೂ ಇತರ ಆಯಾಮಗಳಲ್ಲಿಯೂ ತನಿಖೆ ನಡೆಸುವ ದೃಷ್ಟಿಯಲ್ಲಿ ರಕ್ತದ ಮಾದರಿ ಸಂಗ್ರಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...