ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನಿ ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.
ಹುಬ್ಬಳ್ಳಿ-ಧಾರವಾಡ ಒಂದನೇ ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿ ಫಯಾಜ್ ನನ್ನು 6 ದಿನಗಳ ಕಾಲ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ನೀಡಿದೆ.
ಕೆಲ ದಿನಗಳ ಹಿಂದೆ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ನಿರಂಜನ ಹಿರೇಮಠ ಮಗಳು ನೇಹಾ ಹಿರೇಮಠಳನ್ನು ಬಿವಿಬಿ ಕಾಲೇಜು ಆವರಣದಲ್ಲಿಯೇ ದುಷ್ಕರ್ಮಿ ಫಯಾಜ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಬಂಧಿತ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಆರೋಪಿಯನ್ನು ಕಸ್ಟಡಿಗೆ ಪಡೆದಿದ್ದಾರೆ.