
ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿದ ಆರೋಪಿ ಫಯಾಜ್ ರುಂಡ ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಜಯ ಕರ್ನಾಟಕ ಸಂಘಟನೆಯ ಮುಖಂಡ ಇಜಾರಿ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಯಾಜ್ ಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುವುದಾಗಿ ಹೇಳಿದ್ದಾರೆ.
ಕಾರ್ಪೊರೇಟರ್ ಪುತ್ರಿ ನೇಹಾ ಹತ್ತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಾಳಿನ ಬಂದ್ ಗೆ ಎಲ್ಲರೂ ಬೆಂಬಲಿಸಬೇಕು. ಬಂದ್ ಅಂಗವಾಗಿ ಬಿವಿಪಿ ಕಾಲೇಜಿನಿಂದ ನಾಳೆ ಮೆರವಣಿಗೆ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.