ಉಡುಪಿ: ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಏರ್ ಹೋಸ್ಟೆಸ್ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಆರೋಪಿ ಪ್ರವೀಣ್ ಅರುಣ್ ಚೌಗಲೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಪ್ರಕರಣದಲ್ಲಿ ಜೈಲುಪಾಲಾಗಿರುವ ಆರೋಪಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ, ಜಾಮೀನು ಅರ್ಜಿ ವಜಾಗೊಳಿಸಿದೆ.
ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯ, ಆರೋಪಿಯ ಕೂದಲಿನ ಡಿಎನ್ ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದು ಬರ್ಬರ ಹತ್ಯೆಯ ಆರೋಪಿ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.
ಮಲ್ಪೆ ಠಾಣೆಯ ವ್ಯಾಪ್ತಿಯ ನೇಜಾರುವಿನಲ್ಲಿ ಐನಾಜ್, ಹಸೀನಾ, ಅಫ್ನಾನ್, ಆಸೀಮ್ ಎಂಬ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿತ್ತು.