
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತವಾಗಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ನೆಲಮಂಗಲ ಟೌನ್ ನಲ್ಲಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದಾಗ, ಲಾರಿಗೆ ಓಮಿನಿ ಡಿಕ್ಕಿಯಾಗಿದ್ದು, ಓಮಿನಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಲಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ವೇಗವಾಗಿದ್ದ ವಾಹನಗಳು ಡಿಕ್ಕಿ ಹೊಡೆದುಕೊಂಡು ಅವಘಡ ಸಂಭವಿಸಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.