alex Certify BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು, ಪತಿ ಗಂಭೀರ: ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು, ಪತಿ ಗಂಭೀರ: ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿ

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು ಕಂಡಿದ್ದು, ಪತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯದಲ್ಲಿ ಅಪಘಾತ ಸಂಭವಿಸಿದೆ.

ಸುಂಕದಕಟ್ಟೆಯ ನೀಲಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಪತಿ ಬಸವರಾಜ ಗಂಭೀರವಾಗಿ ಗಾಯಗೊಂಡಿದ್ದು, ದಾಬಸ್ ಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ಅತಿ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...