ಬೆಳಗಾವಿ(ಸುವರ್ಣ ಸೌಧ): ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಂದಿನ ಶೈಕ್ಷಣಿಕ ಸಾಲಿನಿಂದ ಆಯ್ದ ಪ್ರದೇಶಗಳ ಸೀಮಿತ ಸಂಖ್ಯೆಯ ಕಾಲೇಜುಗಳಲ್ಲಿ ಮಾತ್ರ ನೂತನ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತದೆ. ಇದಕ್ಕಾಗಿ ಶಿಕ್ಷಕರಿಗೆ ಅಗತ್ಯವಾಗಿ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.