ರಾಜ್ಯದಲ್ಲಿರುವ NEP (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದು ಮಾಡಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸಿದ್ದು, ಈ ವೇಳೆ ಈ ವಿಚಾರ ಪ್ರಸ್ತಾಪಿಸಿದರು. ರಾಜ್ಯದಲ್ಲಿರುವ NEP ರದ್ದು ಮಾಡಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಿದ್ದೇವೆ ಎಂದು ಸಿಎಂ ಹೇಳಿದರು.
ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್ ಮಂಡನೆ ಮಾಡಿದ್ದು, ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಘೋಷಿಸಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.ಈ ಬಾರಿ ಸಿಎಂ ಸಿದ್ದರಾಮಯ್ಯ ಬರೋಬ್ಬರಿ 3,27,747 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಅದರಲ್ಲಿ ಇಲಾಖಾವಾರು ಅನುದಾನ ನೋಡುವುದಾದರೆ…
ಶಿಕ್ಷಣ ಇಲಾಖೆ- 37,000 ಕೋಟಿ ಅನುದಾನ ಮೀಸಲು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ
ಇಂಧನ ಇಲಾಖೆ-22,000 ಕೋಟಿ ಅನುದಾನ
ನೀರಾವರಿ ಇಲಾಖೆ -19,000 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-18,000 ಕೋಟಿ
ಒಳಾಡಳಿತ ಮತ್ತು ಸಾರಿಗೆ -16,000 ಕೋಟಿ
ಕಂದಾಯ ಇಲಾಖೆ-16,000 ಕೋಟಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-14,000 ಕೋಟಿ
ಸಮಾಜ ಕಲ್ಯಾಣ ಇಲಾಖೆ-11,000ಕೋಟಿ
ಲೋಕೋಪಯೋಗಿ ಇಲಾಖೆ-10,000 ಕೋಟಿ
ಕೃಷಿ ಮತ್ತು ತೋಟಗಾರಿಕೆ ಇಲಾಖೆ-5,800 ಕೋಟಿ
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.