
ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಈ ಕುರಿತಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ. ಮತ್ತೊಮ್ಮೆ ಪ್ರತ್ಯೇಕ ಸಭೆ ಕರೆದು ಸಮಗ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.