
ಕಠ್ಮಂಡು: ನೇಪಾಳದ ಕಠ್ಮಂಡು ಕಣಿವೆ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಭಾನುವಾರ ಬೆಳಗ್ಗೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ ಹೇಳಿದೆ.
ಧಾಡಿಂಗ್ ಜಿಲ್ಲೆಯಲ್ಲಿ ಬೆಳಿಗ್ಗೆ 7:39 ರ ಸುಮಾರಿಗೆ ಕಂಪನದ ಕೇಂದ್ರಬಿಂದು ವರದಿಯಾಗಿದೆ. ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ ಪ್ರಾಣ ಹಾನಿಯ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.