ನವದೆಹಲಿ: ಜೂನ್ 16 ರಂದು ನಡೆಯಬೇಕಿದ್ದ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೆಟ್) ಜೂನ್ 18 ರಂದು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ತಿಳಿಸಿದೆ.
ಕೇಂದ್ರ ಲೋಕಸೇವಾ ಆಯೋಗ ವತಿಯಿಂದ ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ಸೇವೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಡೆಸುವ ಸಿವಿಲ್ ಸರ್ವಿಸ್ ಪರೀಕ್ಷೆ ಪೂರ್ವಭಾವಿ ಪರೀಕ್ಷೆ ದಿನವೇ ನೆಟ್ ಪರೀಕ್ಷೆಯು ನಿಗದಿಯಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಎರಡೂ ಪರೀಕ್ಷೆಗಳು ಒಂದೇ ದಿನಾಂಕದಂದು ನಿಗದಿಯಾದ ಬಗ್ಗೆ ಅಭ್ಯರ್ಥಿಗಳು ಆಯೋಗಕ್ಕೆ ಮಾಹಿತಿ ನೀಡಿದ್ದರು. ದಿನಾಂಕ ಬದಲಾವಣೆಗೆ ಕೋರಿದ್ದರು. ಈ ಹಿನ್ನಲೆಯಲ್ಲಿ ಜೂನ್ 16ರಂದು ನಿಗದಿಯಾಗಿದ್ದ ನೆಟ್ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲಾಗುವುದು.