alex Certify GOOD NEWS : ಶೀಘ್ರವೇ ಹೊಸ APL, BPL ಕಾರ್ಡ್ ವಿತರಣೆ : ಸಚಿವ K.H ಮುನಿಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರವೇ ಹೊಸ APL, BPL ಕಾರ್ಡ್ ವಿತರಣೆ : ಸಚಿವ K.H ಮುನಿಯಪ್ಪ

ಬೆಂಗಳೂರು : ಶೀಘ್ರವೇ ಹೊಸ APL, BPL ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಪಡಿತರ ಚೀಟಿಗಾಗಿ ರಾಜ್ಯಾಧ್ಯಂತ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ, ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಹೊಸ APL, BPL ಕಾರ್ಡ್ ವಿತರಿಸಲಾಗುತ್ತದೆ ಎಂದರು. ಹೊಸ ಪಡಿತರ ಚೀಟಿ ಕೋರಿ ಬಹುತೇಕ ಜನ ಅರ್ಜಿ ಸಲ್ಲಿಸಿದ್ದಾರೆ. ಇವುಗಳನ್ನು ಪರಿಶೀಲಿಸಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಎಂಬುದಾಗಿ ಪತ್ಯೇಕವಾಗಿ ಕಾರ್ಡ್ ನೀಡಲಾಗುತ್ತದೆ ಎಂದು ಹೇಳಿದರು.

ಈ ಹಿಂದಿನ ಬಿಜೆಪಿ ಸರ್ಕಾರ ಹೊಸ ರೇಷನ್ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿತ್ತು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಡಿತರ ಕಾರ್ಡ್ ವಿತರಿಸಲಾಗುತ್ತಿದೆ ಎಂದರು.

ಅದೇ ರೀತಿ ಶೀಘ್ರದಲ್ಲೇ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ನೀಡಲಿದ್ದೇವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ, ಅದಕ್ಕೆ ಬೇರೆ ವ್ಯವಸ್ಥೆ ಮಾಡಿದ್ದೇವೆ, ಶೀಘ್ರದಲ್ಲೇ 10 ಕೆಜೆ ಅಕ್ಕಿ ಕೊಡಲಾಗುತ್ತದೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...