ಬೆಂಗಳೂರು: ನವಜಾತ ಶಿಶುಗಳ ಕಡ್ಡಾಯ ಶ್ರವಣ ತಪಾಸಣೆಗೆ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಶ್ರವಣದೋಷದ ಸಮಸ್ಯೆ ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ತಾಯಿ -ಮಕ್ಕಳ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನವಜಾತ ಶಿಶುಗಳಿಗೆ ಕಡ್ಡಾಯವಾಗಿ ಶ್ರವಣ ತಪಾಸನೆ ನಡೆಸಲು ಸೂಚಿಸಲಾಗಿದೆ. ಶ್ರವಣ ಸಮಸ್ಯೆ ಇದ್ದ ನವಜಾತ ಶಿಶುಗಳಿಗೆ ಸೂಕ್ತ ವೈದ್ಯಕೀಯ ನೆರವು ಕಲ್ಪಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.