
ರಾಯಚೂರು: ನವಜಾತ ಶಿಶುವಿನ ಮೃತದೇಹ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಾಗರ್ ಕ್ಯಾಂಪ್ ಬಳಿ ನಡೆದಿದೆ.
ಹುಟ್ಟಿದ ಕೆಲವೇ ಸಮಯದಲ್ಲಿ ಮಗುವನ್ನು ಕಾಲುವೆಗೆ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತುಂಬಿ ಹರಿಯುತ್ತಿದ್ದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಶಿಶುವನ್ನು ಕಂಡ ಸ್ಥಳೀಯರು ಮಗುವನ್ನು ಮೇಲಕೆತ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶಿಶುವನ್ನು ಹೆತ್ತವರೇ ಬಿಸಡಿರುವ ಸಂಶಯ ವ್ಯಕ್ತವಾಗಿದೆ. ಬಳಗಾನೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.